ಗಣೇಶೋತ್ಸವದಲ್ಲಿ ಪ್ಲಾಸ್ಟಿಕ್ ಬಳೆಕೆ ನಿಷೇಧ, ನಗರಸಭೆ ಆದೇಶ. ರಾಮನಗರ -ನಗರಸಭೆ ಗೌರಿ ಗಣೇಶ ಮೂರ್ತಿ ಸ್ಥಾಪಿಸುವ ಪೆಂಡಾಲುಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿದೆ. ಗಣೇಶೋತ್ಸವದಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಲೂನ್‌ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್, ಪ್ಲಾಸ್ಟಿಕ್ ಐಸ್ ಕ್ರೀಂ ಸ್ಟಿಕ್, ಅಲಂಕಾರಕ್ಕಾಗಿ ಬಳಸುವ ಪ್ಲಾಸ್ಟಿಕ್ ಶೀಟ್ , ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ದ್ವಜಗಳು, ಅಂಟಿಕೊಳ್ಳುವ ಫಿಲ್ಮಗಳು, ಡೈನಿಂಗ್ ಟೇಬಲ್‌ನಲ್ಲಿ ಬಳಸುವ ಪ್ಲಾಸ್ಟಿಕ್ ಹಾಳೆಗಳು ಪ್ಲಾಸ್ಟಿಕ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಕಪ್‌ಗಳು ಮತ್ತು ಲೋಟಗಳು, ಬಳಸುವುದನ್ನು ನಿಷೇಧಿಸಿ ನಗರಸಭೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.