ಕೊಡಗು ಜಿಲ್ಲೆಯಲ್ಲಿ ಈ ಬಾರಿ ಮೇ ತಿಂಗಳಿನಿಂದಲ್ಲೇ ನಿರಂತರ ಮಳೆಯಾಗುತ್ತಿರುವುದರಿಂದ ನಾನಾ ರೀತಿಯ ಅವಾಂತರ ಮುಂದುವರೆದಿದೆ. ಅಲ್ಲದೆ ಸುರಿಯುತ್ತಿರುವ ಮಳೆಯ ಪರಿಣಾಮ ಸೋಮವಾರಪೇಟೆ ಹಾಗೂ ಮಡಿಕೇರಿ ತಾಲೂಕಿನ ಹಲವಾರು ಭಾಗದಲ್ಲಿ ಕಾಫಿ ಬೆಳೆಗಳು ನೆಲಕಚ್ಚಿದೆ. ಕಾಫಿ ತೋಟಗಳು ಸಂಪೂರ್ಣವಾಗಿ ಹಾಳಾಗಿದ್ದು ಈ ವರ್ಷ ಹಾಗೂ ಮುಂದಿನ ವರ್ಷಕ್ಕೆ ಬೆಳೆಯೇ ಇಲ್ಲದಂತಾಗಿ ಬೆಳೆಗಾರರು ಕಂಗಾಲಾಗಿದ್ದಾರೆ.