ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೆ ತಂದು ದಲಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ಸುಮಾರು 30 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ಮಾಡುತ್ತಿರುವ ದಲಿತ ಮುಖಂಡರುಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನ್ಯಾಯ ಒದಗಿಸಿದ್ದಾರೆ. ದಲಿತ ಸಮುದಾಯಗಳನ್ನು ಮೂರು ವಿಭಾಗಗಳಲ್ಲಿ ವಿಂಗಡಿಸಿ ಸಮಾನ ರೀತಿಯಲ್ಲಿ ಮೀಸಲಾತಿ ನೀಡುವ ಮೂಲಕ ಸಮಗ್ರ ನ್ಯಾಯ ನೀಡುತ್ತಾರೆ ಎಂದು ವಿಜಯಪುರದಲ್ಲಿ ಸೋಮವಾರ ಸಾಯಂಕಾಲ 4ಗಂಟೆ ಸುಮಾರಿಗೆ ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ರಮೇಶ್ ಗುಬ್ಬೇವಾಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದರು.