ಬರೋಬ್ಬರಿ 10 ಅಡಿ ಉದ್ದದ ಬೃಹತ್ ಗಾತ್ರದ ಹೆಬ್ಬಾವು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾಣಿಸಿಕೊಂಡು ವಾಹನ ಸವಾರರಲ್ಲಿ ಕೆಲಕಾಲ ಆತಂಕಕ್ಕೆ ಕಾರಣವಾದ ಘಟನೆ ಶೃಂಗೇರಿ ತಾಲೂಕಿನ ಮುಂಡಗೋಡು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ನಡೆದಿದೆ. ಶಿವಮೊಗ್ಗದಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು ರಾತ್ರಿ ಸಂಚರಿಸುತ್ತಿದ್ದ ವಾಹನ ಸವಾರರ ಮೊಬೈಲ್ ನಲ್ಲಿ ಹೆಬ್ಬಾವು ಪತ್ತೆಯಾಗಿದೆ. ಕಳೆದ ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಮುಂಡಗೋಡು ಬಳಿ ಈ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ರಸ್ತೆಯಿಂದ ಮತ್ತೊಂದು ಕಡೆ ಹೋಗಲು ಕಷ್ಟಪಡುತ್ತಿದ್ದ ದೃಶ್ಯ ಕಂಡು ಬಂದಿದೆ. ಯಾವುದೋ ಪ್ರಾಣಿಯನ್ನು ತಿಂದು ತೆವಳಲು ಆಗದೆ. ರಸ್ತೆಯಲ್ಲೇ ನಿಧಾನಕ್ಕೆ ಹೆಬ್ಬಾವು ತೆವಳುತ್ತ ಮುಂದೆ ಸಾಗಿದೆ. ಈ ಬಗ್ಗೆ ಸ್ಥಳೀ