ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ವತಿಯಿಂದ ಇಂದು ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ನೀಡಿರುವ ಹಿನ್ನೆಲೆ ಮೈಸೂರಿನ ವಿವಿಧೆಡೆಗಳಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ. ಕುವೆಂಪುನಗರದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಪ್ರತಿಭಟನೆ. ಧರ್ಮ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರಾರು. ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಶಿವಕುಮಾರ್, ಬಿಜೆಪಿ ಮುಖಂಡರಾದ ಮಹೇಶ್, ಗೋಕುಲ್ ಗೋವರ್ಧನ್, ಜೋಗಿ ಮಂಜು, ಮಾಜಿ ಉಪಮೇಯರ್ ಶೈಲೇಂದ್ರ ಸೇರಿದಂತೆ ಹಲವರು ಭಾಗಿ.