18 ವರ್ಷದ ಯುವತಿ ನೇಣಿಗೆ ಶರಣು 18 ವರ್ಷದ ಯುವತಿ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಿನಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ಇಂದು ಸಂಜೆ ನಡೆದಿದೆ. ಬಾಗೇಪಲ್ಲಿ ಮೂಲದ ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಪೂಜಿತಾ (18), ಮೃತ ದುರ್ದೈವಿ. ಮೃತ ದುರ್ದೈವಿಯ ಪೋಷಕರು 15 ವರ್ಷಗಳಿಂದೆ ಬಾಗೇಪಲ್ಲಿಯಿಂದ ದೊಡ್ಡಬಳ್ಳಾಪುರಕ್ಕೆ ಬಂದು ಬಾಡಿಗೆ ಮನೆಗಳಲ್ಲಿ ವಾಸವಿದ್ದರು ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.