ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಈರುಳ್ಳಿ ಬೆಳೆದ ರೈತರು ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ಮಳೆಕಾಟ ಮತ್ತೊಂದು ಕಡೆ ಬೆಲೆ ಇಳಿಕೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಕರೆಗೆ ೨೫ ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆದ ಈರುಳ್ಳಿಗೆ ಸಾವಿರ ರೂಪಾಯಿ ಸಹ ಸಿಗುತ್ತಿಲ್ಲ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ