ಹಾಸನ: ಅರಣ್ಯ ಸಂರಕ್ಷಣೆ ಸಕಲ ಜೀವಿಗಳ ಉಳಿವಿನ ಭಾಗವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹೇಮಾವತಿ ತಿಳಿಸಿದರು. ನಗರದ ಡೈರಿ ವೃತ್ತದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ ಇಂದು ರಾಷ್ಟ್ರೀಯ ಅರಣ್ಯ ಇಲಾಖೆಯಲ್ಲಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅಧಿಕಾರಿ ಸಿಬ್ಬಂದಿಗಳಿಗೆ ಪುಷ್ಪನಮನ ಸಲ್ಲಿಸಿ ಬಳಿಕ ಮಾತನಾಡಿದ ಅವರು, ಅರಣ್ಯ ಸಕಲ ಜೀವಿಗಳು ಬದುಕಲು ಪ್ರಕೃತಿ ನೀಡಿರುವ ಬಹುಮುಖ್ಯ ಕೊಡುಗೆ, ಆದರೆ ಇತ್ತೀಚಿನ ದಿನಗಳಲ್ಲಿ ಮಾನವನು ತನ್ನ ವೈಯಕ್ತಿಕ ಹಿತಾಸಕ್ತಿಗೆ ನಾಶ ಮಾಡುವ ಹಾಗೂ ಒತ್ತುವರಿ ಮಾಡುವ ಕೆಲಸ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದರು.