ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೌರಸಮುದ್ರ ಗ್ರಾಮದಲ್ಲಿ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು. ಭಾದ್ರಪದ ಮಾಸದ ಮೊದಲ ಮಂಗಳವಾರ ನಡೆಯುವ ಈ ಜಾತ್ರೆಗೆ ಲಕ್ಷಾಂತರ ಮಂದಿ ಭಕ್ತರು ಸಾಕ್ಷಿಯಾದರು. ಮಧ್ಯಾಹ್ನದ ಮಾರಮ್ಮ ಎಂದೇ ಪ್ರಸಿದ್ದಿಯಾಗಿರುವ ಬುಡಕಟ್ಟು ಜನರ ಆರಾಧ್ಯ ದೈವ ಮಾರಮ್ಮ ದೇವಿ ತುಮ್ಮಲು ಪ್ರದೇಶಕ್ಕೆ ಆಗಮಿಸುತ್ತಿದ್ದಂತೆ ಭಕ್ತರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಈ ವೇಳೆ ದೇವಿಗೆ ಹರಕೆ ರೂಪದಲ್ಲಿ ಈರುಳ್ಳಿ, ಕೋಳಿಗಳನ್ನ ಎಸೆಯುವ ಮೂಲಕ ಭಕ್ತರು ತಮ್ಮ ಭಕ್ತಿ ಸಪರ್ಪಿಸಿದರು. ಆಂದ್ರ ಗಡಿ ಪ್ರದೇಶದಲ್ಲಿ ನಡೆಯುವ ಜಾತ್ರೆಗೆ ಚಿತ್ರದುರ್ಗ, ತುಮಕೂರು ದಾವಣಗೆರೆ, ಬಳ್ಳಾರಿ ಸೇರಿ ರಾಜ್ಯದ ನಾನಾ ಭಾಗಗಳಿಂದ ಹಾಗೂ ಆಂದ್ರ ಪ್ರದೇಶದ ಹಲವು ಕಡೆಗಳಿಂದ ಭಕ್ತರು ಬಂದಿದ್ದರು