ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕೋಟೆಕೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿತವಾದ ಸಾರ್ವಜನಿಕ ಗ್ರಂಥಾಲಯವನ್ನು ಶಾಸಕ ಗಣೇಶ್ ಪ್ರಸಾದ್ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದ ಬಳಿಕ ಶಾಸಕ ಗಣೇಶ್ ಪ್ರಸಾದ್ ಮಾತನಾಡಿ ಗ್ರಂಥಾಲಯಗಳು ಜ್ಞಾನದ ಭಂಡಾರವಾಗಿದ್ದು, ಗ್ರಾಮೀಣ ಯುವತೆ ಮತ್ತು ವಿದ್ಯಾರ್ಥಿಗಳಿಗೆ ಈ ಮೂಲಸೌಕರ್ಯ ಅತ್ಯಂತ ಅಗತ್ಯವಾಗಿದೆ. ಓದು ಮತ್ತು ಅರಿವು ಮೂಲಕವೇ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.ಅಲ್ಲದೆ ವಿಶೇಷವಾಗಿ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಯುವಕರಿಗೆ ಈ ಗ್ರಂಥಾಲಯವು ಸದ್ಭಳಕೆಯಾದರೆ, ಅದು ಅವರ ಭವಿಷ್ಯ ನಿರ್ಮಾಣಕ್ಕೆ ಪೂರಕವಾಗಲಿದೆ,” ಎಂಬ ಆಶಯವನ್ನು ವ್ಯಕ್ತಪಡಿಸಿದರು.