ಹಾಸನ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸೋಮನಹಳ್ಳಿ ನಾಗರಾಜ್ ಅವರು ಅಧ್ಯಕ್ಷರಾಗಿ, ಶೇಖರಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ವಿವಿಧ ಗಣ್ಯರು ಅವರಿಗೆ ಶುಭ ಕೋರಿದರು.ವಿಧಾನ ಪರಿಷತ್ ಸದಸ್ಯರಾದ ಸೂರಜ್ ರೇವಣ್ಣ ಶಾಸಕರಾದ ಸಿಎನ್ ಬಾಲಕೃಷ್ಣ ಸೇರಿದಂತೆ ಸಹಕಾರಿ ಸಂಘದ ಎಲ್ಲಾ ನಿರ್ದೇಶಕರ ಸಮ್ಮುಖದಲ್ಲಿ ಉಪ ವಿಭಾಗಾಧಿಕಾರಿ ಮಾರುತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಯನ್ನು ಘೋಸಿದರು.ಬಳಿಕ ಮಾತನಾಡಿದ ಅವರು, ಮಾನ್ಯ ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ವರಿಷ್ಠರಾದ ಎಚ್ಡಿ ದೇವೇಗೌಡರು, ಕೇಂದ್ರ ಸಚಿವ ಎಚ್ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್ಡಿ ರೇವಣ್ಣ ಅವರು ಹಾಗೂ ಎಲ್ಲಾ ಜೆಡಿಎಸ್ ಶಾಸಕರು ಹಾಗೂ ಎಲ್ಲಾ ನಿರ್ದೇಶಕರ ಸಹಕಾರ ದಿಂದ ಇದು ಸಾಧ್ಯ ಎಂದರು.