ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಶಿಂಗನಹಳ್ಳಿ ಕ್ರಾಸ್ ಬಳಿ ಭಾನುವಾರ ಸಂಭವಿಸಿದೆ. ವಿಜಯಪುರ ಜಿಲ್ಲೆ ಹೂವಿನಹಡಗಲಿಯ ಹೊನ್ನಪ್ಪ ಹನುಮಂತಪ್ಪ (೪೬) ಸ್ಥಳದಲ್ಲೇ ಮೃತಪಟ್ಟ ವ್ಯಕ್ತಿ. ಬೆಳಗಾವಿಯಿಂದ ಧಾರವಾಡ ಕಡೆಗೆ ಹೊರಟಿದ್ದ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ತಲೆ, ಕೈ ಕಾಲಿಗೆ ಗಂಭೀರ ಗಾಯವಾಗಿದ್ದರಿಂದ ಹೊನ್ನಪ್ಪ ಮೃತಪಟ್ಟಿದ್ದಾನೆ.