ಅಲೆಮಾರಿಗಳಿಗೆ 1 ಪರ್ಸೆಂಟ್ ಮೀಸಲಾತಿ ಜಾರಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಸ್ಲಂ ಜನಾಂದೋಲನ ಕರ್ನಾಟಕ ಇವರ ವತಿಯಿಂದ ಸೋಮವಾರ ಮಧ್ಯಾಹ್ನ 12 ಗಂಟೆಗೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಒಳಮಿಸಲಾತಿಗಾಗಿ ಸರಿ ಸುಮಾರು 35 ವರ್ಷಗಳ ಜನ ಚಳವಳಿಯ ಸುಧೀರ್ಘ ಹೋರಾಟದ ಫಲವಾಗಿ ಸರ್ವೋಚ್ಚ ನ್ಯಾಯಲಯವು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಅಧಿಕಾರ ರಾಜ್ಯ ಸರಕಾರಗಳಿಗೆ ಇದೆ ಎಂದು ಆದೇಶ ನೀಡಿದೆ.