ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರ್ವಾಮ್ ಅಪ್ ಡ್ಯಾನ್ಸ್ ಅನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಸಿಇಒ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ.ಕವಿತಾ, ಕಾಡಾ ಅಧ್ಯಕ್ಷ ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಪೊಲೀಸ್ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು, ಕ್ರೀಡಾ ಪಟುಗಳು ಕುಣಿದು ಕುಪ್ಪಳಿಸಿದರು.