ಚಿತ್ರದುರ್ಗದ ವಿಜ್ಞಾನ ಕಾಲೇಜು ಮುಂಬಾಗ ತರಗತಿ ಬಹಿಷ್ಕಾರ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ. ಈ ಶೈಕ್ಷಣಿಕ ಗೊಂದಲವನ್ನು ಪರಿಹರಿಸುವಂತೆ ಆಗ್ರಹಿಸಿ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು, ಸರ್ಕಾರಿ ಆರ್ಟ್ಸ್ ಕಾಲೇಜು ಹಾಗೂ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ ಎಐಡಿಎಸ್ಓ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.