ಹುಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಧಾರವಾಡ ದಸರಾ ಜಂಬೂ ಸವಾರಿ ಉತ್ಸವ ಸಮಿತಿಗೆ ದಸರಾ ಉತ್ಸವದ ಅಂಗವಾಗಿ ವಸ್ತು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಕಡಪಾ ಮೈದಾನ ನೀಡದೇ ಉತ್ಸವವನ್ನೇ ಮೊಟಕುಗೊಳಿಸುವ ಪ್ರಯತ್ನ ಮಾಡುತ್ತಿದೆ ಎಂದು ಸಮಿತಿ ಅಧ್ಯಕ್ಷ ಗುರುರಾಜ ಹುಣಸಿಮರದ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೆ. ೧೨ರಿಂದ ಅಕ್ಟೋಬರ್ ೧೨ರವರೆಗೆ ಕಡಪಾ ಮೈದಾನದಲ