ಗ್ರಾಮಾಂತರ ಪ್ರದೇಶಗಳಲ್ಲಿ ಬೆಳೆ ಖರೀದಿ ಕೇಂದ್ರ ತೆರೆಯುವ ಬದಲು ಮದ್ಯದಂಗಡಿಗಳನ್ನು ಸರ್ಕಾರ ತೆರೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಕಿಡಿಕಾರಿದರು. ನರಸಮಂಗಲ ಗ್ರಾಮದಲ್ಲಿ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿ, ರಾಷ್ಟ್ರದಲ್ಲಿ ಎಂ.ಎಸ್. ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರದೆ ಬಂಡವಾಳಶಾಹಿಗಳ ಪರ ಕಾನೂನುಗಳನ್ನು ರೂಪಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಗ್ನವಾಗಿವೆ. ಗ್ರಾಮೀಣ ಭಾಗದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯದೆ ರಾಜ್ಯ ಸರ್ಕಾರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮದ್ಯದ ಅಂಗಡಿ ತೆರೆಯಲು ಹೊರಟಿವೆ ಎಂದರು.