ಗಣೇಶ ಹಬ್ಬ ಹಾಗೂ ಈದ್-ಮೀಲಾದ್ ಹಬ್ಬಗಳ ಮೆರವಣಿಗೆ ಸಂದರ್ಭಗಳಲ್ಲಿ ಸರ್ವೋಚ್ಚ/ಉಚ್ಚ ನ್ಯಾಯಾಲಯಗಳ ನಿರ್ದೇಶನದಂತೆ ಜಿಲ್ಲಾದ್ಯಂತ ಡಿಜೆ ನಿಷೇಧಿಸಿ ಜಿಲ್ಲಾಧಿ ಕಾರಿಗಳು ಹೊರಡಿಸಿದ ಆದೇಶ ಉಲ್ಲಂಘನೆಯಾಗದಂತೆ ಧ್ವನಿವರ್ಧಕಗಳನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಂದ ಅನುಮತಿ ಪಡೆದುಕೊಂಡು ಉಪಯೋಗಿಸಿ, ಸಾರ್ವಜನಿಕರು ಶಾಂತಿಯಿಂದ ಹಬ್ಬಗಳನ್ನು ಆಚರಣೆ ಮಾಡುವಂತೆ ವಿನಂತಿಸಲಾಗಿದೆ. ಈ ಆದೇಶ ಉಲ್ಲಂಘಿಸಿದವರ ವಿರುದ್ಧ ಈಗಾಗಲೇ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಡಿಜೆ ಬಳಕೆ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಬಿತ್ತರಿಸಿದ್ದಲ್ಲಿ ಅಂಥವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.