ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ನಗರದಲ್ಲಿ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಕೇಂದ್ರ ಬಿಂದು ಸ್ಥಳವಾದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮಾಜಿ ಶಾಸಕ ಹಾಗೂ ಕೆಎಂಎಫ್‌ನ ಮಾಜಿ ರಾಜ್ಯಾಧ್ಯಕ್ಷರಾದ ಗಾಲಿ ಸೋಮಶೇಖರರೆಡ್ಡಿ ನೇತೃತ್ವದಲ್ಲಿ ಜಮಾವಣೆಗೊಂಡ ಬಿಜೆಪಿ ಮುಖಂಡರು, ಕಾರ್ಯಕರ್ತರು ಅಲ್ಲಿಂದ ಸ್ಟೇಷನ್ ರಸ್ತೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ, ಅಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಕಾಂಗ್ರೆಸ್ ಸರ್ಕಾರ ಬಂದ್ರೇ ಹಿಂದೂ ಧಾರ್ಮಿಕ ಕೇಂದ್ರ ಟಾರ್ಗೆಟ್ ಮಾಡಲಾಗ್ತದೆ.. ಅನಾಮಿಕ ಹೇಳಿದಂತೆ ಸರ್ಕಾರ ಯಾಕೆ ಕುಣಿಬೇಕು. ಷಡ್ಯಂತ್ರದ ವಿರುದ್ಧ ಯಾರಿದ್ದಾರೆ ಬಹಿರಂಗ ಪಡಿಸಲು ಆಗ್ರಹ.