ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಬಾಗಿಲನ್ನು ಹೊಡೆದು ಒಳಗಿದ್ದಂತ ನಗದು ಹಣ ಹಾಗೂ ಚಿನ್ನಾಭರಣವನ್ನು ಕಳವು ಮಾಡಲಾಗಿದೆ. ಮಾಗಡಿ ತಾಲೂಕಿನ ಸೋಲೂರು ಹೋಬಳಿ ಅಂಬೇಡ್ಕರ್ ನಗರದಲ್ಲಿ ಘಟನೆ ನಡೆದಿದೆ, ನಾರಾಯಣಸ್ವಾಮಿ ರವರಿಗೆ ಸೇರಿದಂತ ಮನೆಯಲ್ಲಿ ಕಳವು ಮಾಡಲಾಗಿದೆ. ಒಂದುವರೆ ಲಕ್ಷ ನಗದು ಹಣ ಹಾಗೂ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ. ಒಟ್ಟು ಐದು ಲಕ್ಷದ ಐವತ್ತು ಸಾವಿರ ರೂಪಾಯಿಯ ನಗದು ಹಾಗೂ ಚಿನ್ನಾಭರಣಗಳನ್ನ ಕಳವು ಮಾಡಲಾಗಿದೆ. ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲು ಮಾಡಲಾಗಿದೆ.