ವಿದ್ಯಾರ್ಥಿಗಳ ಅತ್ಯುನ್ನತ ಸಾಧನೆಗೆ ಶಿಕ್ಷಣವೊದೇ ಸಾಧನ ಆಗಿದೆ. ವಿದ್ಯಾರ್ಥಿ ಜೀವನದಲ್ಲಿ ಶ್ರಮಪಟ್ಟು ಓದಿದರೆ ಮುಂದಿನ ಜೀವನ ಸುಖಮಯವಾಗಿರುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಿ ಸಾಧನೆ ಮಾಡಬೇಕು ಅಂತ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮದ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.