ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮೆರವಣಿಗೆಗೆ ಭಾನುವಾರ ಮಧ್ಯಾನ 2 ಗಂಟೆ ಸುಮಾರಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆನ್ನೂರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮೆರವಣಿಗೆಯು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿವೃತ್ತ ಬಸವೇಶ್ವರ ವೃತ್ತ ಮಾರ್ಗವಾಗಿ ಕಂದಗಲ್ಲ ರಂಗಮಂದಿರದವರೆಗೂ ಜರುಗಿತು. ಭವ್ಯ ಮೆರವಣಿಗೆಯಲ್ಲಿ ಸಮಾಜದ ಮುಖಂಡರುಗಳು ಅಧಿಕಾರಿಗಳು ಸಾರ್ವಜನಿಕರು ಭಾಗಿಯಾಗಿದ್ದರು.