ಜಿಲ್ಲಾಧಿಕಾರಿ ಲತಾ ಕುಮಾರಿ ಅನಾರೋಗ್ಯದಿಂದ ಹಾಸನದ ಜನಪ್ರಿಯ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಸ್ವತಂತ್ರ ಹೋರಾಟಗಾರ ಶಿವಣ್ಣ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ಕಳೆದ ಹಲವು ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶಿವಣ್ಣ ಅವರು ಹಾಸನದ ಜನಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ವಿಷಯ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಲತಾ ಕುಮಾರಿ ಶಿವಣ್ಣ ಅವರ ಆರೋಗ್ಯದ ಕುರಿತು ಜನಪ್ರಿಯ ಆಸ್ಪತ್ರೆಯ ವೈದ್ಯ ಬಶೀರ್ ಅವರಿಂದ ಮಾಹಿತಿ ಪಡೆದರು