ದಾಂಡೇಲಿ : ಜಿಲ್ಲೆಯ ಪ್ರತಿಷ್ಠಿತ ಕೆಡಿಸಿಸಿ ಬ್ಯಾಂಕಿನ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆಯುವ ಚುನಾವಣೆಯಲ್ಲಿ ಅರ್ಬನ್ ಬ್ಯಾಂಕ್ ಹಾಗೂ ಕೃಷಿಯೇತರ ಸಹಕಾರಿ ಸಂಘಗಳ ಮತಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಮಹಿಳೆಯರ ಹಾಗೂ ಸಹಕಾರಿ ಸಂಘಗಳ ಪರ ಗಟ್ಟಿ ಧ್ವನಿಯಾಗಿ ನಿಲ್ಲಬೇಕೆಂಬ ಆಶಯದಡಿ ಈ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದು ಕೆಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಿರುವ ಹಾಗೂ ಶಿರಸಿಯ ಸ್ಕೊಡ್ ವೆಸ್ ಮಹಿಳಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಸರಸ್ವತಿ ಎನ್.ರವಿ ಅವರು ಸ್ಪಷ್ಟಪಡಿಸಿದರು. ಅವರು ಇಂದು ಶುಕ್ರವಾರ ಮಧ್ಯಾಹ್ನ 3.00 ಗಂಟೆ ಸುಮಾರಿಗೆ ದಾಂಡೇಲಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಿದ್ದರು.