Download Now Banner

This browser does not support the video element.

ಕುಕನೂರ: ಮಂಗಳೂರು ಗ್ರಾಮದ ರೈತ ಸಂಪರ್ಕ ಕೇಂದ್ರ ಕಚೇರಿಯನ್ನು ಬಂದ್ ಮಾಡಿ ರಸಗೊಬ್ಬರಕ್ಕೆ ಪ್ರತಿಭಟನೆ

Kukunoor, Koppal | Aug 28, 2025
ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ರೈತ ಸಂಪರ್ಕ ಕೇಂದ್ರದ ಮುಂಭಾಗದಲ್ಲಿ ರೈತರು ರೈತ ಸಂಪರ್ಕ ಕೇಂದ್ರದ ಕಚೇರಿಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಿದರು. ಆಗಸ್ಟ್.28 ರಂದು ಮಧ್ಯಾಹ್ನ 2-30 ಗಂಟೆಗೆ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಯಲಬುರ್ಗಾ ತಾಲೂಕ ಸಹಾಯಕ ಕೃಷಿ ನಿರ್ದೇಶಕ ಪ್ರಮೋದ ಭೇಟಿ ಮಾಡಿ ರೈತರೊಂದಿಗೆ ಮಾತನಾಡಿ ಮೂರು ನಾಲ್ಕು ದಿನಗಳ ಒಳಗಾಗಿ ಸಮರ್ಪಕ ರಸಗೊಬ್ಬರ ಪೂರೈಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಂಗಳೂರು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ನಿಂಗಪ್ಪ ಹಿರೇಹಾಳ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರು ಶರಣಪ್ಪ ಹ್ಯಾಟಿ, ನಿರ್ದೇಶಕ ಮಹಾಲಿಂಗಯ್ಯ ಕಲ್ಮಠ, ಗಂಗಾಧರ ಬಡಿಗೇರ ಭಾಗಿ
Read More News
T & CPrivacy PolicyContact Us