ಪಿಪಿಪಿ ಮಾದರಿಯ ವೈದ್ಯಕೀಯ ಕಾಲೇಜು ಸ್ಥಾಪನೆ ವಿಚಾರವಾಗಿ ಸರ್ಕಾರದ ನಿರ್ಧಾರ ಖಂಡಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಸಚಿವ ಎಂ ಬಿ ಪಾಟೀಲ ಬೇಟಿ ನೀಡಿ ಧರಣಿ ಕೈ ಬಿಡುವಂತೆ ಮನವಿ ಮಾಡಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ. 12ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನಾ ನಿರತರೊಟ್ಟಿಗೆ ಮಾತನಾಡಿದ ಸಚಿವ ಎಂ ಬಿ ಪಾಟೀಲ, ಧರಣಿ ವಿಚಾರ ಸರ್ಕಾರದ ಗಮನಕ್ಕೆ ತರುವೆ, ಧರಣಿ ಕೈ ಬಿಡುವಂತೆ ಮನವಿ ಮಾಡಿದರು.