ದಶಕಗಳ ಹಿಂದೆ ದಾಖಲೆ ಸಲ್ಲಿಸಿ ಆಧಾರ್ ನೊಂದಾಯಿಸಿಕೊಂಡಿರುವರು ಪ್ರಸ್ತುತ ವಾಸಸ್ಥಳದ ವಿವರಗಳನ್ನು ತಮ್ಮ ಸಮೀಪದ ಅಂಚೆ ಕಚೇರಿ, ರಾಷ್ಟ್ರೀಕೃತ ಬ್ಯಾಂಕುಗಳು ಅಥವಾ ಆಧಾರ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಿ, ಆಧಾರ್ ನವೀಕರಿಸಿಕೊಳ್ಳುವಂತೆ ಎಡಿಸಿ ಸಿದ್ಧಲಿಂಗರೆಡ್ಡಿ ಸಾರ್ವಜನಿಕರಿಗೆ ತಿಳಿಸಿದ್ದಾರೆ. ನಗರದ ಎಡಿಸಿ ಕಚೇರಿ ಕಾರ್ಯಾಲಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಆಧಾರ್ ನೋಂದಣಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಂಗಳವಾರ ಸಂಜೆ 4 ಗಂಟೆಗೆ ಮಾತನಾಡಿದ ಅವರು ಐದು ವರ್ಷದೊಳಗಿನ ಎಲ್ಲಾ ಮಕ್ಕಳ ಪೋಷಕರು ತಮ್ಮ ಮಕ್ಕಳ ಆಧಾರ್ ನೋಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೇ ಆಧಾರ್ ನೋಂದಣಿ ಮಾಡಿಸಿದ್ದಾರೆ.