ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 12:30 ರ ಸುಮಾರಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದು, ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು. ತುಂಗಾ ಭದ್ರಾ ಅಣೆಕಟ್ಟಿನಲ್ಲಿ ಪ್ರಥಮ ಬೆಳೆಗೆ ಮಾತ್ರ ನೀರು ಲಭ್ಯವಿದ್ದು, ಎರಡನೇ ಬೆಳೆಗೆ ನೀರು ಹರಿಸಲು ಪ್ರಸ್ತುತ ಸನ್ನಿವೇಶದಲ್ಲಿ ಸಾಧ್ಯವಿಲ್ಲ. ನೀರು ಹರಿಸುವ ಪೂರ್ವದಲ್ಲೇ ಎಲ್ಲಾ ಸಣ್ಣಪುಟ್ಟ ದುರಸ್ತಿ ಕಾರ್ಯಗಳನ್ನು ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.