ಇತ್ತೀಚೆಗಷ್ಟೇ ವಿಧಾನಸಭೆ ಅಧಿವೇಶನದಲ್ಲಿ ಆರೆಸ್ಸೆಸ್‌ನ "ನಮಸ್ತೇ ಸದಾ ವತ್ಸಲೇ ಮಾತೃಭೂಮೇ.." ಪ್ರಾರ್ಥನಾ ಗೀತೆಯನ್ನು ಹಾಡಿ ಅಚ್ಚರಿ ಮೂಡಿಸಿದ್ದರು ಡಿಸಿಎಂ ಡಿಕೆ ಶಿವಕುಮಾರ್. ಅವರ ಆ ವಿಡಿಯೋ ತುಣುಕು ವ್ಯಾಪಕ ಚರ್ಚೆ ಜೊತೆಗೆ ರಾಷ್ಟ್ರವ್ಯಾಪಿ ಸದ್ದು ಮಾಡಿತ್ತು. ಇದೀಗ ಆ ಹಾಡು ಹೇಳಿದ್ದಕ್ಕೆ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿ ಮಧ್ಯಾಹ್ನ ೨ ಗಂಟೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಿಮ್ಮ ಭಾವನೆಗೆ ನಾನು ನೋವು ಮಾಡಿಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ನಾನು ಕ್ಷಮೆ ಕೇಳುತ್ತೇನೆ. ಇಂಡಿಯಾ ಮೈತ್ರಿಕೂಟಕ್ಕೂ ನಾನು ಕ್ಷಮೆ ಕೇಳುತ್ತೇನೆ. ಕ್ಷಮೆ ಕೇಳುವುದರಲ್ಲಿ ತಪ್ಪೇನಿಲ್ಲ. ಸದನದಲ್ಲಿ ನಾನು ಪಾಸಿಂಗ್ ಕಮೆಂಟ್ ಕೊಟ್ಟವನು.