ವಿಜಯನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು. ಬುಧವಾರ ಸಾಯಂಕಾಲ 5ಗಂಟೆ ಸುಮಾರಿಗೆ ಪೊಲೀಸ್ ಅಧಿಕಾರಿಗಳು ಭವ್ಯ ಮೆರವಣಿಗೆಯೊಂದಿಗೆ ನೃತ್ಯ ಮಾಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಇನ್ನು ಮಹಿಳಾ ಸಿಬ್ಬಂದಿಗಳು ಗಣೇಶನಿಗೆ ಮಹಾಮಂಗಳಾರತಿ ಮಾಡಿ ನೈವೇದ್ಯ ಮಾಡಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.