ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ನಾಳೆ ನಡೆಯಲಿರುವ ರಾಜಬೀದಿ ಉತ್ಸವಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗಣಪತಿ ಮೆರವಣಿಗೆ ಹೋಗುವ ರಸ್ತೆಗಳನ್ನ ಈಗಾಗಲೇ ಎರಡು ಬಾರಿ ವೀಕ್ಷಣೆ ಮಾಡಿದ್ದೇನೆ. ಎರಡು ತಿಂಗಳಿಗಳಿಂದ ಶಾಂತಿ ಸಭೆ ಸೇರಿ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದರು.