ಪಡಿತರ ಅನ್ನ ಭಾಗ್ಯ ಯೋಜನೆ ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ಕೂಲಿ ಹೆಚ್ಚಳ, ಇಎಸ್ಐ, ಪಿಎಫ್ ಹಾಗೂ ಕಾರ್ಮಿಕ ಕಾನೂನುಗಳನ್ನು ಸಮರ್ಪಕವಾಗಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಲೋಡಿಂಗ್ ಮತ್ತು ಅನ್ಲೋಡಿಂಗ್ ಕಾರ್ಮಿಕರ ಒಕ್ಕೂಟ ಒಕ್ಕೂಟದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ನಗರದ ಪ್ರವಾಸಿ ಮಂದಿರದಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಮೆರವಣಿಗೆ ಹೊರಟು, ರಾಷ್ಟ್ರೀಯ ಹೆದ್ದಾರಿ ಹಾದುಹೋಗಿರುವ ಶ್ರೀ ಭುವನೇಶ್ವರಿ ವೃತ್ತದ ತಲುಪಿದರು. ಬಳಿಕ ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿ, ಕೆಲಕಾಲ ಧರಣಿ ನಡೆಸಿದರು.