2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 3ರಂದು ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿಜಯಪುರದಲ್ಲಿ ಶನಿವಾರ ಸಾಯಂಕಾಲ 5ಗಂಟೆ ಸುಮಾರಿಗೆ ಜಿಲ್ಲಾಧಿಕಾರಿ ಆನಂದ್ ಕೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದರು. ಆಸಕ್ತ ಮಹಿಳಾ ಮತ್ತು ಪುರುಷ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗಿಯಾಗಬಹುದು ಸೆಪ್ಟೆಂಬರ್ 3 ಮತ್ತು 4ರಂದು ಎರಡು ದಿನಗಳ ಕಾಲ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.