ರಾಮನಗರ - ಭಾರತ್ ವಿಕಾಸ್ ಪರಿಷತ್ ಹಮ್ಮಿಕೊಂಡಿದ್ದ ನೂತನ ಪದಾಧಿಕಾರಿಗಳ ಪಧಗ್ರಹಣ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಯಲ್ಲಿ ಹೆಚ್ಚಿನ ಅಂಕಗಳಿಸಿದ ತಾಲ್ಲೂಕಿನ ವಿಧ್ಯಾರ್ಥಿಗಳಿನ್ನು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಭಾರತ್ ವಿಕಾಸ್ ಪರಿಷತ್ ನೂತನ ಅಧ್ಯಕ್ಷರಾಗಿ ಎಂ.ಜಗದೀಶ್ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಎಂ.ಜಗದೀಶ್, ಕಳೆದ 20 ವರ್ಷಗಳಿಂದ ನಾಡು, ನುಡಿ ಬಗ್ಗೆ ಹಲವು ಹೋರಾಟಗಳ ನಡೆಸುವುದರ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ ಎಂದರು