ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳಿಕೆ ನೀಡಿ ಎಸ್‌ಐಟಿ ತನಿಖೆಗೆ ಒಳಪಟ್ಟಿದ್ದ 'ಮಾಸ್ಕ್ ಮ್ಯಾನ್' ಚಿನ್ನಯ್ಯ ಅವರನ್ನು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭದ್ರತಾ ದೃಷ್ಟಿಯಿಂದ ಚಿನ್ನಯ್ಯ ಅವರನ್ನು ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಇರಿಸುವಂತೆ ನ್ಯಾಯಾಲಯವು ಸೂಚಿಸಿದೆ. ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶ ವಿಜೇಂದ್ರ ಹೆಚ್‌ಟಿ ಅವರ ಚಿನ್ನಯ್ಯ ಅವರನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಭದ್ರತಾ ಕಾರಣಗಳಿಗಾಗಿ ಅವರನ್ನು ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು ಆದೇಶವನ್ನು ಶನಿವಾರ ನೀಡಿದ್ದಾರೆ.