ತೋಟಕ್ಕೆ ಹೋಗುತ್ತಿದ್ದ ವೇಳೆ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿರುವಾಗ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾವಿನ ಕೆರಿಯ ತೋಟದ ಸಮೀಪದಲ್ಲಿ ಶನಿವಾರ ನಡೆದಿದೆ. 38 ವರ್ಷದ ಮಧುಸೂದನ್ ಎಂಬುವರು ಎಂದಿನಂತೆ ಬಂಡಿಗುಡ್ಡದ ಮಾವಿನಕೆರೆ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ಕರಡಿ ದಾಳಿ ಮಾಡಿದ ಕರಡಿ ದಾಳಿಯಿಂದ ಗಾಯಗೊಂಡಿದ್ದ ಮಧುಸೂದನ್ ಅವರನ್ನು ಭದ್ರಾವತಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಡಿ ದಾಳಿಯಿಂದಾಗಿ ಮಾವಿನಕಾಯಿ ಗ್ರಾಮಸ್ಥರು ಆತಂಕಕ್ಕೀಡಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕರಡಿಯನ್ನು ಸೆರೆ ಹಿಡಿಯುವಂತೆ ಮನವಿ ಮಾಡಿಕೊಂಡಿದ್ದಾರೆ.