ಹನೂರು :ನಮ್ಮ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ದೇಶದ ಹಲವು ಭಾಗಗಳಲ್ಲಿ ವಿರೋಧ ಪಕ್ಷಗಳು ಅನುಕರಿಸುತ್ತಿವೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಹೇಳಿದರು. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಕೆಸ್ತೂರು ಗ್ರಾಮದಲ್ಲಿ ಆಯೋಜಿಸಿದ ಗ್ಯಾರಂಟಿ ಯೋಜನೆಗಳ ಸಭೆಯಲ್ಲಿ ಮಾತನಾಡಿದ ಶಾಸಕರು ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದ ನಾಯಕರು, ಬೇರೆ ರಾಜ್ಯಗಳ ಚುನಾವಣೆಯಲ್ಲಿ ಅವರ ಪ್ರಣಾಳಿಕೆಯಲ್ಲಿ ಕೂಡ ಇದೇ ರೀತಿಯ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು,ಉದಾಹರಣೆಗೆ, ದೆಹಲಿಯಲ್ಲಿ ಕ ಚುನಾವಣೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಘೋಷಣೆ ಮಾಡುವ ಮೂಲಕ ಮುಂದಾದರು. ಅಲ್ಲದೆ ಮಹಾರಾಷ್ಟ್ರ ಸೇರಿದಂತೆ ಕೆಲ ರಾಜ್ಯಗಳಲ್ಲೂ ನಮ್ಮ ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ಅನುಷ್ಟಾನವಾಗಿದೆ ಎಂದರು