ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಹೀಗಾಗಿ ನಾನು ಮಾತನಾಡದಿರುವುದೇ ಉತ್ತಮ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮಾತನಾಡಿ, "ನಾನು ಸದನದಲ್ಲಿ ಸೇರಿದಂತೆ ಎಲ್ಲಿ ಏನೇ ಮಾತನಾಡಿದರು ಅದರಲ್ಲಿ ಕೇವಲ ತಪ್ಪು ಕಂಡು ಹಿಡಿಯುವುದೇ ಬೇರೆಯವರ ಕೆಲಸವಾಗಿದೆ. ರಾಜಕೀಯದವರು, ಮಾಧ್ಯಮಗಳು, ಪ್ರಮೋದಾ ದೇವಿ ಅವರು, ಸಂಸದ ಯದುವೀರ್ ಅವರು - ಹೀಗೇ ಎಲ್ಲರೂ ತಪ್ಪು ಹುಡುಕುವವರೇ. ಹೀಗಾಗಿ ನಾನು ಮಾತನಾಡದಿರುವುದೇ ಲೇಸು ಅನಿಸುತ್ತದೆ. ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಿಸಲು ಬೇರೆ ನಾಯಕರು ಹಾಗೂ ಪಕ್ಷದ ವಕ್ತಾರರಿದ್ದಾರೆ. ಅವರ ಬಳಿ ಮಾತನಾಡಿ" ಎಂದು ಹೇಳಿದರು.