ಅಫಜಲಪೂರ ತಾಲೂಕಿನ ಭೋಸಗಾ ಗ್ರಾಮದಲ್ಲಿ ಇತ್ತಿಚೀಗೆ ಸುರಿದ ಮಳೆಯಿಂದ ಮನೆಯ ಗೋಡೆ ಕುಸಿದು ಮಹಿಳೆ ಲಕ್ಷ್ಮೀಬಾಯಿ ಬಿರಾದಾರ್ ಮೃತ ಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಶಾಸಕ ಎಂವೈ ಪಾಟೀಲ್ ಸಾಂತ್ವನ ಹೇಳಿ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರದ ಚೆಕ್‌ನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಸಂಜೀವವಕುಮಾರ ದಾಸರ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಕಾಶ್ ಜಮಾದಾರ, ಕೆಪಿಸಿಸಿ ಸದಸ್ಯ ಪಪ್ಪು ಪಟೇಲ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಮೇಶ ಪೂಜಾರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಾನಂದ ಗಾಡಿಸಾಹುಕಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು ಎಂದು ಭಾನುವಾರ 9 ಗಂಟೆಗೆ ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ.