ಅಕ್ಟೋಬರ್ 3ರಂದು ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯ ಅವರ ಜನ್ಮದಿನ ಹಿನ್ನೆಲೆ, ರಾಜ್ಯಮಟ್ಟದ ರಂಗೋಲಿ ಸ್ಪರ್ಧೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಗುರುವಾರ ಸಾಯಂಕಾಲ 4 ಗಂಟೆ ಸುಮಾರಿಗೆ ಮಾಜಿ ಸಚಿವ ಎಸ್ ಕೆ ಬೆಳ್ಳುಬಿ ಮಾಧ್ಯಮಕ್ಕೆ ಹೇಳಿಕೆ ನೀಡಿದರು. ರಾಜ್ಯಮಟ್ಟದ ರಂಗೋಲಿ ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮಹಿಳೆಯರು ಭಾಗಿಯಾಗಲಿದ್ದಾರೆ ಎಂದು ಹೇಳಿದರು. ರಂಗೋಲಿ ಸ್ಪರ್ಧೆ ಕಾರ್ಯಕ್ರಮವನ್ನು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.