ಬಾಗಲಕೋಟೆ ನಗರದಲ್ಲಿ ಗಣೇಶ ಉತ್ಸವ ಹಾಗೂ ಈದ್-ಮಿಲಾದ್ ಹಬ್ಬಗಳ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಹಾಗೂ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ಸಲುವಾಗಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು. ಬಾಗಲಕೋಟೆ ಎಸ್ಪಿ ಸಿದ್ಧಾರ್ಥ ಗೋಯಲ್,ಹೆಚ್ಚುವರಿ ಎಸ್ಪಿ ಮಹಾಂತೇಶ್ವರ ಜಿದ್ದಿ ,ಡಿವೈಎಸ್ಪಿ ಗಜಾನನ ಅವರು ಸೇರಿದಂತೆ ಬಾಗಲಕೋಟೆಯ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.ನಗರದ ಪ್ರಮುಖ ಬೀದಿಗಳಲ್ಲಿ,ಆಯಕಟ್ಟಿನ ಸ್ಥಳಗಳಲ್ಲಿ ಪಥ ಸಂಚಲನ ಜರುಗಿತು.