ಗೊಂಡ ಕಾಡು ಕುರುಬ ಹಾಗೂ ಪರ್ಯಾಯ ಪದಗಳಿಗೆ ಎಸ್ ಟಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಕಲಬುರ್ಗಿ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಆದಿವಾಸಿ ಅಲೆಮಾರಿ ಬುಡಕಟ್ಟು ಮೂಲ ನಿವಾಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಪರಿಶಿಷ್ಟ ಪಂಗಡಕ್ಕೆ ಒಳಪಡುವ ಗೊಂಡ ಕಾಡು ಕುರುಬ, ಜೇನು ಕುರುಬ ಬೆಟ್ಟ ಕುರುಬ ಜಾತಿಗಳಿಗೆ ಸಿಂಧುತ್ವ ಹಾಗೂ ಜಾತಿ ಪ್ರಮಾಣ ಪತ್ರ ನೀಡದೆ ಸತಾಯಿಸುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ತಕ್ಷಣ ಸರ್ಕಾರ ಎಸ್‌ಟಿ ಪ್ರಮಾಣ ಪತ್ರ ಒದಗಿಸುವ ಕೆಲಸ ಮಾಡಬೇಕೆಂದು ಆಗ್ರಹಿಸಲಾಯಿತು. ಶುಕ್ರವಾರ ನಾಲ್ಕು ಗಂಟೆಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಾಗಿದೆ...