ನವಲಗುಂದ ತಾಲ್ಲೂಕಿನ ಗುಡಿಸಾಗರ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಸಾರ್ವಜನಿಕರು ಅಸ್ವಸ್ಥರಾಗಿದ್ದು ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿ ಶ್ರೀಮತಿ ದಿವ್ಯಾಪ್ರಭು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಗುಂಜನ್ ಆರ್ಯ ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಶುದ್ದ ಕುಡಿಯುವ ನೀರಿನ ಘಟಕ ತಕ್ಷಣ ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲಾಯಿತು. ಈ ಮೊದಲು ತಾಲ್ಲೂಕಾ ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಗೆ ದಾಖಲಾದ 19 ಜನರ ಆರೋಗ್ಯವನ್ನು ವಿಚಾರಿಸಲಾಯಿತು,