ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಮುದಗಲ್ - ಬಾಗಲಕೋಟೆ ರಸ್ತೆಯಲ್ಲಿ ಸಂಭವಿಸಿದ್ದ ರಸ್ತೆ ಅಪಘಾತ ನಡೆದ ಘಟನಾ ಸ್ಥಳಕ್ಕೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ಆಗಸ್ಟ್ 31 ರ ರವಿವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುವ ಸ್ಥಳ ಗುರುತಿಸಿ ಮುಂಜಾಗ್ರತಾ ಕ್ರಮ ಅನುಸರಿಸಬೇಕು. ರಸ್ತೆ ಅಪಘಾತಗಳನ್ನು ಗಂಭೀರವಾಗಿ ಪರಿಗಣಿಸಿ ಅವಶ್ಯ ಸೂಚನಾ ಫಲಕ ಅಳವಡಿಸಲು ಹಾಗೂ ಮುಂದಿನ ಕಾನೂನು ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.