ಕರ್ನಾಟಕ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅತ್ಯಂತ ಮಹತ್ವಪೂರ್ಣವಾದ ಸಮೀಕ್ಷೆಯಾಗಿರುವುದರಿಂದ ಎಲ್ಲರ ಸಹಯೋಗ ಅಗತ್ಯ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ದಿಲೀಪ ಬದೋಲೆ ತಿಳಿಸಿದರು. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿAದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ರ ಜಿಲ್ಲಾ ಮಟ್ಟದ ಮಾಸ್ಟರ್ ಟ್ರೇನರಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.