2025ರ ಮುಂಗಾರು ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿ ಹಾಗೂ ಕೈಗೊಳ್ಳಲಾದ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಯಿತು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರು ಸಭೆಯಲ್ಲಿ ಭಾಗವಹಿಸಿ, ಜಿಲ್ಲೆಯ ಪ್ರವಾಹ ಪರಿಸ್ಥಿತಿ, ಹಾನಿಗೊಳಗಾದ ಗ್ರಾಮಗಳು, ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ ಕಲ್ಪಿಸಬೇಕು ಎಂದು ಮನವಿ ಮಾಡಿದರು