ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ನಗರದ ನುಚ್ಚಂಬ್ಲಿ ಬಾವಿಯಲ್ಲಿ ಗಂಗಾ ಪೂಜೆಯನ್ನು ಸಲ್ಲಿಸಲಾಯಿತು. ಶನಿವಾರ ಬೆಳಗ್ಗೆ 10 ಗಂಟೆಗೆ ಗಂಗಾ ಪೂಜೆಯನ್ನು ಮಹಾನಗರ ಪಾಲಿಕೆ ಸದಸ್ಯೆ ದೀಪಾ ನೀರಲಕಟ್ಟಿ ಹಾಗೂ ಕಾಂಗ್ರೆಸ್ ಮುಖಂಡೆ ಗೌರಮ್ಮ ಬಲೋಗಿ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಹಿಳಾ ಕಾಂಗ್ರೆಸ್ ಮುಖಂಡೆ ವಿಜಯಲಕ್ಷ್ಮೀ ಅನಾಡ, ವಾಣಿ ಶಿಲೀನ್ ಸೇರಿದಂತೆ ಇತರರು ಇದ್ದರು.