ತರಕಾರಿ ಮಾರುವ ಮಹಿಳೆಯ ಮಗಳು ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ 13 ನೇ ಘಟಿಕೋತ್ಸವದಲ್ಲಿ ನಾಲ್ಕು ಚಿನ್ನದ ಪದಕ ಗಳಿಸಿದ್ದಾರೆ. ಮೂಲತಃ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ನಿವಾಸಿ ನಾಗಮ್ಮಳ ಪುತ್ರಿ ಹಂಸಾ ಈ ವಿಶಿಷ್ಟ ಸಾಧನೆಗೈದ ವಿದ್ಯಾರ್ಥಿನಿ. ಬಳ್ಳಾರಿಯ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರದ ಸ್ನಾತಕೋತ್ತರ ಪದವಿಯಲ್ಲಿ ಹಂಸಾ ಎನ್ನುವ ವಿದ್ಯಾರ್ಥಿನಿ ನಾಲ್ಕು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾಳೆ. ಕರ್ನಾಟಕದ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರಚಂದ್ ಗೆಹ್ಲೋಟ್ ಅವರ ಹಸ್ತದಿಂದ ಹಂಸಾ ಎನ್ ಅವರು ಗುರುವಾರ ಬೆಳಿಗ್ಗೆ 11:30ಕ್ಕೆ ಚಿನ್ನದ ಪದಕಗಳನ್ನು ಸ್ವೀಕರಿಸಿದ ಸಂದರ್ಭಕ್ಕೆ ಅವರ ತಾಯಿ ಸಾಕ್ಷಿಯಾಗಿದ್ದು ವಿಶೇಷ.