6.ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಡೇಟಿಂಗ್ ಮಾಡಲು ಯುವತಿಯರು ಹಾಗೂ ಆಂಟಿಯರು ಸಿಗುತ್ತಾರೆ, ಸರ್ವಿಸ್ ಬೇಕಾದರೆ ಕರೆ ಮಾಡಿ ಎಂದು ಮೊಬೈಲ್ ಸಂಖ್ಯೆಯೊAದನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ರಚಾರ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಬಂಧಿತ ಆರೋಪಿಯಾಗಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ವಿಡಿಯೋ ಹರಿಬಿಟ್ಟ ಕುರಿತು ವಿವಿಧ ಸಂಘ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕಾಗಿ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಕೊಡಗು ಜಿಲ್ಲಾ ಪೊಲೀಸ್ ಘ