ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಕಾರುಂದು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಂದಕಕ್ಕೆ ಬಿದ್ದಿರುವ ಘಟನೆಯನ್ನು ನಡೆದಿದೆ. ಇನ್ನು ರಭಸವಾಗಿ ಬಂದಂತಹ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡ್ ಗೆ ಡಿಕ್ಕಿ ಹೊಡೆದು ಕಂದಕಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಗಾಯಗೊಂಡವರನ್ನು ಸ್ಥಳೀಯರು ತಾಲೂಕು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನಾಸ್ಥಳಕ್ಕೆ ಸಿಂದಗಿ ಪೊಲೀಸರು ಗುರುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರ್ ವಾಹನವು ವಿಜಯಪುರದಿಂದ ಸಿಂದಗಿ ಪಟ್ಟಣಕ್ಕೆ ತಲುತ್ತಿದ್ದು ಎಂದು ಸ್ಥಳೀಯರು ಹೇಳಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.